ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಕನಿಷ್ಠ 34 ಮಂದಿ ಸಾವನ್ನಪ್ಪಿದ್ದು, ಸುಮಾರು 100 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದ್ದು. ಈವರೆಗೆ ನಾಲ್ವರನ್ನು ಬಂಧಿಸಲಾಗಿದೆ.
ಗಂಭೀರ ರೋಗಿಗಳನ್ನು ಸೇಲಂ, ತಿರುವಣ್ಣಾಮಲೈ ಮತ್ತು ಪುದುಚೇರಿಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸಾವಿನಿಂದ ಆಘಾತಕ್ಕೊಳಗಾಗಿದ್ದಾರೆ ಮತ್ತು ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಎಂಕೆ ಸ್ಟಾಲಿನ್, “ಕಲ್ಲಾಕುರಿಚಿಯಲ್ಲಿ ಕಲಬೆರಕೆ ಮದ್ಯ ಸೇವಿಸಿದ ಜನರ ಸಾವಿನ ಸುದ್ದಿ ಕೇಳಿ ನನಗೆ ಆಘಾತ ಮತ್ತು ದುಃಖವಾಯಿತು. ಈ ಪ್ರಕರಣದಲ್ಲಿ ಅಪರಾಧದಲ್ಲಿ ಭಾಗಿಯಾದವರನ್ನು ಬಂಧಿಸಲಾಗಿದೆ. ತಡೆಯುವಲ್ಲಿ ವಿಫಲರಾದ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ. ಇಂತಹ ಅಪರಾಧಗಳಲ್ಲಿ ಭಾಗಿಯಾದವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.