ತಮಿಳುನಾಡು ಹೂಚ್ ದುರಂತ: ಸಿಎಂ ಸ್ಟಾಲಿನ್ ರಾಜೀನಾಮೆಗೆ ಎಐಎಡಿಎಂಕೆ ಆಗ್ರಹ

ಹೊಸದಿಗಂತ ಡಿಜಿಟಲ್ ಡೆಸ್ಕ್:

ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಅಕ್ರಮ ಮದ್ಯ ಸೇವಿಸಿ ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಇಪ್ಪತೊಂಬತ್ತು ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ ಎಂದು ಕಲ್ಲಕುರಿಚಿ ಜಿಲ್ಲಾಧಿಕಾರಿ ಎಂಎಸ್ ಪ್ರಶಾಂತ್ ಇಂದು ತಿಳಿಸಿದ್ದಾರೆ.

ಘಟನೆಯಲ್ಲಿ 60 ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ, ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಒಟ್ಟು 107 ಜನರನ್ನು ದಾಖಲಿಸಲಾಗಿದ್ದು, ಈ ಪೈಕಿ 59 ಜನರನ್ನು ಸೇಲಂ, ವಿಲ್ಲುಪುರಂ ಮತ್ತು ಪುದುಚೇರಿಯಂತಹ ಇತರ ಸ್ಥಳಗಳ ಆಸ್ಪತ್ರೆಗೆ ಉಲ್ಲೇಖಿಸಲಾಗಿದೆ.

29 ಸಾವುಗಳಲ್ಲಿ 18 ಜನರು ಕಲ್ಲಕುರಿಚಿ ಸರ್ಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಮತ್ತು 11 ಜನರು ಇತರ ಆಸ್ಪತ್ರೆಗಳಿಂದ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ತಮಿಳುನಾಡು ಸರ್ಕಾರ ಬುಧವಾರ ಸಂಜೆ ಜಿಲ್ಲಾಧಿಕಾರಿ ಶ್ರವಣ್ ಕುಮಾರ್ ಜಾತಾವತ್ ಅವರನ್ನು ವರ್ಗಾವಣೆ ಮಾಡಿದ್ದು, ಪೊಲೀಸ್ ವರಿಷ್ಠಾಧಿಕಾರಿ ಸಮಯ್ ಸಿಂಗ್ ಮೀನಾ ಅವರನ್ನು ಅಮಾನತುಗೊಳಿಸಿದೆ. ರಾಜ್ಯ ಸರ್ಕಾರದ ಪ್ರಕಾರ, ಎಂಎಸ್ ಪ್ರಶಾಂತ್ ಅವರನ್ನು ಹೊಸ ಜಿಲ್ಲಾಧಿಕಾರಿಯಾಗಿ ಮತ್ತು ರಜತ್ ಚತುರ್ವೇದಿ ಅವರನ್ನು ಹೊಸ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಿಸಲಾಗಿದೆ.

ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಕೆ ಪಳನಿಸ್ವಾಮಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಡಿಎಂಕೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ ಘಟನೆಗೆ ಸಂಬಂಧಿಸಿದಂತೆ ಡಿಎಂಕೆ ಮುಖ್ಯಸ್ಥ ಮತ್ತು ರಾಜ್ಯ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ರಾಜೀನಾಮೆ ನೀಡಬೇಕು ಎಂದು ಪಳನಿಸ್ವಾಮಿ ಒತ್ತಾಯಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!