ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡಿಗೆ 3,000 ಕ್ಯುಸೆಕ್ ನೀರು ಸಾಕಾಗೋದಿಲ್ಲ 5,000 ಕ್ಯುಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್‌ಗೆ ಮನವಿ ಸಲ್ಲಿಸುತ್ತೇವೆ ಎಂದು ತಮುಳುನಾಡು ಜಲಸಂಪನ್ಮೂಲ ಸಚಿವ ದುರೈ ಮುರುಗನ್ ಹೇಳಿದ್ದಾರೆ.
ಇತ್ತ ಕರ್ನಾಟಕದಲ್ಲಿ 3,000 ಕ್ಯುಸೆಕ್ ನೀರು ಬಿಟ್ಟರೂ ನಮಗೆ ನೀರು ಉಳಿಯುವುದಿಲ್ಲ ಎಂದು ರಾಜ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ತಮಿಳುನಾಡು ಇನ್ನೂ ಹೆಚ್ಚು ನೀರು ಬೇಕು ಎಂದು ಸುಪ್ರೀಂಗೆ ಮನವಿ ಮಾಡಲು ಹೊರಟಿದೆ.
ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸ್ತೇವೆ, ನ್ಯಾಯಾಲಯ ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುತ್ತದೆ ಎಂದು ಹೇಳಿದ್ದಾರೆ,