ಹೊಸದಿಗಂತ ಡಿಜಿಟಲ್ ಡೆಸ್ಕ್:
ಮನೆ ಯಜಮಾನಿಗೆ ಪ್ರತಿ ತಿಂಗಳು 1,000 ರೂ ಆರ್ಥಿಕ ನೆರವು ನೀಡುವ ಯೋಜನೆಗೆ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು ಮಾಜಿ ಮುಖ್ಯಮಂತ್ರಿ ಸಿ.ಎನ್ ಅಣ್ಣಾದೊರೈ ಅವರ ಜನ್ಮದಿನವಾದ ಇಂದು ಚಾಲನೆ ನೀಡಿದರು.
ಸಿಎಂ ಸ್ಟಾಲಿನ್ ಅವರು ಹಲವಾರು ಫಲಾನುಭವಿಗಳಿಗೆ ಬ್ಯಾಂಕ್ ಡೆಬಿಟ್ ಕಾರ್ಡ್‌ಗಳನ್ನು ವಿತರಿಸಿದರು. ರಾಜಧಾನಿ ಚೆನ್ನೈ ಮಾತ್ರವಲ್ಲದೆ ರಾಜ್ಯ ಸಚಿವರು ತಮ್ಮ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಸಿ ಯೋಜನೆಗೆ ಚಾಲನೆ ನೀಡಿದರು.
ಈ ಸಹಾಯಧನ ಯೋಜನೆಗೆ ಮಾಜಿ ಮುಖ್ಯಮಂತ್ರಿ ಎಂ ಕರುಣಾನಿಧಿ ಅವರ ಹೆಸರನ್ನು ಇಡಲಾಗಿದೆ ಮತ್ತು ರಾಜ್ಯ ಸರ್ಕಾರವು ಈ ಯೋಜನೆಯನ್ನು ಮಹಿಳೆಯರ “ಹಕ್ಕು” ಎಂದು ಕರೆದಿದೆ.
ಯೋಜನೆ ಅಡಿಯಲ್ಲಿ 1.06 ಕೋಟಿ ಮಹಿಳೆಯರನ್ನು (1,06,50,000) ಫಲಾನುಭವಿಗಳೆಂದು ಸರ್ಕಾರ ಗುರುತಿಸಿದೆ.