ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಉನ್ನತ ಶಿಕ್ಷಣ ಸಚಿವ ಕೆ. ಪೊನ್ಮುಡಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ಪ್ರಕಟಿಸಿದೆ.
1.75 ಕೋಟಿ ರೂಪಾಯಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಸಚಿವ ಹಾಗೂ ಅವರ ಪತ್ನಿ ದೋಷಿಗಳು ಎಂದು ಮದ್ರಾಸ್ ಹೈಕೋರ್ಟ್ ಎರಡು ದಿನಗಳ ಹಿಂದೆ ತಿಳಿಸಿತ್ತು. ಇಂದೆ ಶಿಕ್ಷೆಯ ಪ್ರಮಾಣ ಮೂರು ವರ್ಷ ಎಂದು ಕೋರ್ಟ್ ತಿಳಿಸಿದೆ.
1996 ರಿಂದ 2021 ರವರೆಗಿನ ಡಿಎಂಕೆ ಸರ್ಕಾರದಲ್ಲಿ ಪೊನ್ಮುಡಿ ರಾಜ್ಯ ಸಾರಿಗೆ ಸಚಿವರಾಗಿದ್ದರು. ಈ ವೇಳೆ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಆರೋಪ ಸಾಬೀತಾದ ಹಿನ್ನೆಲೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ.
ಸದ್ಯ ಉನ್ನತ ಶಿಕ್ಷಣ ಖಾತೆಯನ್ನು ಬೇರೆಯವರಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ.