ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧಿತರಾಗಿರುವ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಅನಾರೋಗ್ಯದ ಹಿನ್ನೆಲೆ ಇಂದು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಎಐಎಡಿಎಂಕೆ ಸರ್ಕಾರದ ಅವಧಿಯಲ್ಲಿ ಸಾರಿಗೆ ಸಚಿವರಾಗಿದ್ದ ವೇಳೆ ನಡೆದಿದೆ ಎನ್ನಲಾದ ಉದ್ಯೋಗಕ್ಕಾಗಿ ಹಣ ಪ್ರಕರಣದಲ್ಲಿ ಸೆಂಥಿಲ್ ಬಾಲಾಜಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿ ಜೈಲಿನಲ್ಲಿ ಇರಿಸಲಾಗಿದೆ.
ಈ ಹಿಂದೆಯೂ ಅನಾರೋಗ್ಯ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಸೇರಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.