ಟಿಕೆಟ್‌ ಸಿಗ್ಲಿಲ್ಲ, ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ತಮಿಳುನಾಡು ಸಂಸದ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಟಿಕೆಟ್‌ ಸಿಗದ ಕಾರಣ ತಮಿಳುನಾಡಿನ ಈರೋಡ್‌ ಕ್ಷೇತ್ರದ ಹಾಲಿ ಎಂಡಿಎಂಕೆ ಸಂಸದ ಎ. ಗಣೇಶ್‌ಮೂರ್ತಿ (76) ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಲೋಕಸಭಾ ಚುನಾವಣಾ ಟಿಕೆಟ್‌ ಕೈ ತಪ್ಪಿದ ಕಾರಣ ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಭಾನುವಾರ ಬೆಳಗ್ಗೆ ಗಣೇಶ್‌ಮೂರ್ತಿ ಅವರು ಇದ್ದಕ್ಕಿದ್ದಂತೆ ವಾಂತಿ ಮಾಡಿಕೊಂಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ತಕ್ಷಣ ಕುಟುಂಬದವರು ವಿಚಾರಿಸಿದಾಗ ಕೀಟನಾಶಕ ಕುಡಿದಿರುವುದಾಗಿ ಮಾಹಿತಿ ನೀಡಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಇದೀಗ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೈಕೋ ನಾಯಕತ್ವದ ಎಂಡಿಎಂಕೆ ಪಕ್ಷವು ಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದೆ. ಕಳೆದ ಚುನಾವಣೆಯಲ್ಲಿ ಡಿಎಂಕೆ ತನ್ನ ಮಿತ್ರಪಕ್ಷಕ್ಕೆ ಈರೋಡ್ ಕ್ಷೇತ್ರವನ್ನು ಬಿಟ್ಟುಕೊಟ್ಟಿತ್ತು. ಅಲ್ಲಿಂದ ಎಂಡಿಎಂಕೆ ಅಭ್ಯರ್ಥಿ ಗಣೇಶಮೂರ್ತಿ ಸ್ಪರ್ಧೆ ಮಾಡಿ ಗೆದ್ದಿದ್ದರು. ಈ ಬಾರಿ ಈರೋಡ್ ಲೋಕಸಭೆ ಕ್ಷೇತ್ರದಿಂದ ಡಿಎಂಕೆ ತನ್ನದೇ ಅಭ್ಯರ್ಥಿ ಕೆ.ಇ ಪ್ರಕಾಶ್ ಅವರಿಗೆ ಟಿಕೆಟ್ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!