ಮತ್ತೆ ಕಾವೇರಿ ನೀರು ಬೇಕು ಎಂದ ತಮಿಳುನಾಡು: ಬೇಡಿಕೆ ತಿರಸ್ಕರಿಸಿ CWRC

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜಧಾನಿ ಬೆಂಗಳೂರಿಗರು ನೀರಿಲ್ಲದೆ ಪರದಾಡುತ್ತಿದ್ದಾರೆ. ಕನಿಷ್ಠ ಕುಡಿಯುವ ನೀರು ಕೂಡ ಸಿಗದೇ ಹೈರಾಣಾಗಿದ್ದಾರೆ. ಈ ಮಧ್ಯೆ ಕಾವೇರಿ ನೀರಿಗಾಗಿ ತಮಿಳುನಾಡು ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, 3.6 ಟಿಎಂಸಿ ನೀರಿಗೆ ಆಗ್ರಹಿಸಿದೆ.

ಈ ಬಾರಿ ಮಳೆ ಕೈಕೊಟ್ಟ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯ ಭರ್ತಿಯಾಗದೇ ಕುಡಿಯುವ ನೀರಿಗೂ ಸಂಕಷ್ಟದ ಸ್ಥಿತಿ ಎದುರಾಗಿದೆ.

ಈ ಪರಿಸ್ಥಿತಿಯ ನಡುವೆಯೂ ಮೂರು ತಿಂಗಳ ಬಾಕಿ ಇರುವ 3.6 ಟಿಎಂಸಿ ನೀರನ್ನು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸೂಚಿಸುವಂತೆಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತಮಿಳುನಾಡು ಆಗ್ರಹಿಸಿದೆ.

ಬಾಕಿ ಉಳಿದಿರುವ ನೀರನ್ನು ಬಿಡುಗಡೆ ಮಾಡಲು ಕರ್ನಾಟಕಕ್ಕೆ ಸೂಚಿಸುವಂತೆ ತಮಿಳುನಾಡು ಸರ್ಕಾರ ಸಭೆಯಲ್ಲಿ ಒತ್ತಾಯಿಸಿದೆ. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಕರ್ನಾಟಕದ ಅಧಿಕಾರಿಗಳು, ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೀಗಾಗಿ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ವಾದ ಮಂಡಿಸಿದರು.

ವಾದ ಆಲಿಸಿದ ಸಿಡಬ್ಲ್ಯುಆರ್‌ಸಿ ತಮಿಳುನಾಡಿನ ಆಗ್ರಹವನ್ನು ತಿರಸ್ಕರಿಸಿತು. ತಮಿಳುನಾಡಿನಲ್ಲಿರುವ ಜಲಾಶಯಗಳಲ್ಲಿ ಕುಡಿಯುವ ನೀರಿನ ಅಗತ್ಯತೆಗಳನ್ನು ಪೂರೈಸಲು ಸಾಕಷ್ಟು ನೀರಿದೆ, ಆದರೆ, ಕರ್ನಾಟಕದ ಹಲವು ನಗರಗಳಲ್ಲಿ ತೀವ್ರ ನೀರಿನ ಬಿಕ್ಕಟ್ಟು ಎದುರಾಗಿದೆ ಎಂದು ಹೇಳಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!