Wednesday, August 17, 2022

Latest Posts

ನೀರು ಬಳಕೆ ಬಗ್ಗೆ ಕ್ಯಾತೆ ತೆಗೆಯದಂತೆ ತಮಿಳುನಾಡಿಗೆ ಎಚ್ಚರಿಕೆ: ಎಂ.ಬಿ. ಪಾಟೀಲ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ದಿಗಂತ ವರದಿ ವಿಜಯಪುರ:

ಮೇಕೆದಾಟು ಯೋಜನೆಯಲ್ಲಿ ನಮ್ಮ ನೀರನ್ನು ನಾವು ಬಳಕೆ ಮಾಡಿಕೊಳ್ಳುತ್ತಿದ್ದೇವೆ. ಇದಕ್ಕೆ ತಮಿಳುನಾಡು ಸರ್ಕಾರ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದು ಮಾಜಿ ನೀರಾವರಿ ಸಚಿವ ಎಂ.ಬಿ. ಪಾಟೀಲ ತಮಿಳುನಾಡು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ನಗರದಲ್ಲಿ ಮಾತನಾಡಿ, ನಾವು ನಮ್ಮ ನೀರನ್ನು ಬಳಕೆ ಮಾಡಿಕೊಳ್ಳುತ್ತಿದ್ದೆವೆ. ತಮಿಳುನಾಡು ಮಾತ್ರ ಕ್ಯಾತೆ ತೆಗೆಯಬಾರದು. ಈ ಯೋಜನೆ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆಗೆ ಸಹಾಯಕವಾಗಲಿದೆ. ಅದಕ್ಕಾಗಿ ರಾಜ್ಯ ಸರ್ಕಾರ ಸರ್ವಪಕ್ಷ ಸಭೆ ಕರೆದು ಅಭಿಪ್ರಾಯ ಪಡೆದುಕೊಂಡು ನಂತರ ಕೇಂದ್ರದ ಮೇಲೆ ಒತ್ತಡ ಹಾಕಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!