ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಪಕ್ಷವು ಜಯ ಸಾಧಿಸಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಹೇಳಿದ್ದಾರೆ. ಜೊತೆಗೆ ತಮಿಳುನಾಡು ದೆಹಲಿಯ ನಿಯಂತ್ರಣಕ್ಕೆ ಒಳಪಡುವುದಿಲ್ಲ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಸ್ಟಾಲಿನ್, ಬಿಜೆಪಿಯ ರಾಜಕೀಯ ತಂತ್ರಗಾರ ರಾಜ್ಯದ ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆಯಿಂದ ವಿನಾಯಿತಿ ನೀಡುವುದಾಗಿ, ಹಿಂದಿ ಹೇರುವುದಿಲ್ಲ ಎಂಬುದಾಗಿ ಭರವಸೆ ನೀಡಲಿ ಹಾಗೂ ಲೋಕಸಭಾ ಕ್ಷೇತ್ರಗಳ ಮರುವಿಂಗಣೆ ಕುರಿತು ಸ್ಪಷ್ಟನೆ ನೀಡಲಿ ಎಂದು ಸವಾಲು ಹಾಕಿದ್ದಾರೆ.
ವಿಧಾನಸಭೆ ಚುನಾವಣೆಗಾಗಿ ಎಐಎಡಿಎಂಕೆ ಹಾಗೂ ಬಿಜೆಪಿ ಕಳೆದವಾರ ಮೈತ್ರಿ ಮಾಡಿಕೊಂಡಿರುವುದನ್ನು ಹಗರಣ ಎಂದಿರುವ ಸ್ಟಾಲಿನ್, ತನ್ನ ನಾಯಕರ ವಿರುದ್ಧ ಕೇಂದ್ರದ ತನಿಖಾ ಸಂಸ್ಥೆಗಳು ದಾಳಿ ನಡೆಸಬಹುದು ಎಂಬ ಭಯದಲ್ಲಿ ಎಐಎಡಿಎಂಕೆಯು ರಾಜ್ಯದ ಹಕ್ಕುಗಳನ್ನು ಅಡಮಾನವಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.