Wednesday, August 10, 2022

Latest Posts

ತಮಿಳು ಸಿನಿಮಾರಂಗದ ಹಿರಿಯ ನಟ ತುಳಸಿ ಕೊರೋನಾ ಸೋಂಕಿಗೆ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ತಮಿಳು ಸಿನಿಮಾರಂಗದ ಹಿರಿಯ ನಟ, ಜೋಕರ್ ಖ್ಯಾತಿಯ ತುಳಸಿ ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೋವಿಡ್ ದೃಢಪಟ್ಟ ಹಿನ್ನೆಲೆ ತುಳಸಿ ಅವರನ್ನು ಚೈನ್ನೈನ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ತುಳಸಿ ಅವರ ನಿಧನಕ್ಕೆ ಸಿನಿಮಾರಂಗದ ಗಣ್ಯರು, ಅಭಿಮಾನಿಗಳು, ಹಿತೈಷಿಗಳು ಟ್ವೀಟರ್ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.

ತುಳಸಿ ಅವರು 1976ರಲ್ಲಿ “ಉಂಗಲಿಲ್ ಒರುತಿ” ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಸಿನಿಮಾರಂಗಕ್ಕೆ ಕಾಲಿಟ್ಟಿದ್ದರು. ನಂತರ ಇಳೈನಾರ್ ಆನಿ, ಉದಾನ್ ಪಿರಪ್ಪು, ಅವತಾರಾ ಪುರುಷನ್, ಮನ್ನೈ ತೊಟ್ಟು ಕುಂಬಿದಾನುಮ್ ಹೀಗೆ ಅನೇ ಸಿನಿಮಾಗಳಲ್ಲಿ ನಟಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss