ದೇಶದಲ್ಲಿ ಮಂಕಿಪಾಕ್ಸ್ ಆತಂಕ: ಏರ್​ಪೋರ್ಟ್​ಗಳಲ್ಲಿ ಕಟ್ಟೆಚ್ಚರಕ್ಕೆ ತಮಿಳುನಾಡು ಸರ್ಕಾರ ಸೂಚನೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಮಂಕಿಪಾಕ್ಸ್ ಹರಡುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆ ರಾಜ್ಯದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಿಗೆ ರೋಗಕ್ಕೆ ಸಂಬಂಧಿಸಿದಂತೆ ಕಣ್ಗಾವಲನ್ನು ಹೆಚ್ಚಿಸುವಂತೆ ತಮಿಳುನಾಡು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದೆ.
ಸಾರ್ವಜನಿಕ ಆರೋಗ್ಯ ಮತ್ತು ಪ್ರಿವೆಂಟಿವ್ ಮೆಡಿಸಿನ್ ನಿರ್ದೇಶಕ ಟಿ ಎಸ್ ಸೆಲ್ವವಿನಾಯಗಂ ಮಾತನಾಡಿ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಪ್ರಯಾಣಿಕರು ವಿದೇಶಗಳಿಂದ ಆಗಮಿಸಿದ ನಂತರ ಆರೋಗ್ಯ ತಪಾಸಣೆ ಕೈಗೊಳ್ಳಬೇಕು. ಅನಾರೋಗ್ಯ ಇರುವ ಪ್ರಯಾಣಿಕರನ್ನು ಪ್ರತ್ಯೇಕಿಸಿ ಅವರ ರಕ್ತದ ಮಾದರಿಗಳನ್ನು ಪಡೆದು ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಗೆ ಕಳುಹಿಸಬೇಕು ಎಂದು ಹೇಳಿದರು.
ಚೆನ್ನೈ, ಕೊಯಮತ್ತೂರು, ತಿರುಚಿರಾಪಳ್ಳಿ, ಸೇಲಂ, ಮಧುರೈ ಮತ್ತು ಟುಟಿಕೋರಿನ್‌ನ ವಿಮಾನ ನಿಲ್ದಾಣಗಳಿಗೆ ಯಾವುದೇ ಅಂತಾರಾಷ್ಟ್ರೀಯ ಪ್ರಯಾಣಿಕರು ಜ್ವರ, ತಲೆನೋವು, ಸ್ನಾಯು ನೋವು ಮತ್ತು ಬಳಲಿಕೆಯಿಂದ ಕಂಡು ಬಂದಲ್ಲಿ ಅವರನ್ನು ಕಟ್ಟುನಿಟ್ಟಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಬೇಕು ಎಂದು ಸೂಚಿಸಿದರು.
ಮೇ 20 ರವರೆಗೆ, ಬ್ರಿಟನ್, ಅಮೆರಿಕ, ಯುರೋಪ್, ಆಸ್ಟ್ರೇಲಿಯಾ ಮತ್ತು ಕೆನಡಾದಲ್ಲಿ ಯಾವುದೇ ಸಾವುನೋವುಗಳಿಲ್ಲದೆ ಮಂಕಿಪಾಕ್ಸ್ ಕಾಯಿಲೆಯ ಪ್ರಕರಣಗಳು ವರದಿಯಾಗಿವೆ. ದೇಶದಲ್ಲಿ ಈವರೆಗೆ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿಲ್ಲವಾದರೂ, ಭಾರತದಲ್ಲಿ ಈ ರೋಗ ಸಂಭವಿಸುವ ಸಾಧ್ಯತೆಯನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಸೆಲ್ವವಿನಾಯಗಂ ಎಚ್ಚರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!