ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿರುವುದರ ಕುರಿತಾಗಿ ಮದ್ರಾಸ್ ಹೈಕೋರ್ಟ್ ನೀಡಿರುವ ತೀರ್ಪನ್ನು ಪ್ರಶ್ನಿಸಿ ತಮಿಳುನಾಡು ಸಚಿವ ಸೆಂಥಿಲ್ ಬಾಲಾಜಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ.
ಸಚಿವ ಸೆಂಥಿಲ್ ಬಾಲಾಜಿ ಪತ್ನಿ ಎಸ್. ಮೇಗಳಾ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೂಡ ನಡೆಸಲಾಗುತ್ತಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶಾನಲಯ ಸಚಿವ ಸೆಂಥಿಲ್ ಅವರನ್ನು ಬಂಧಿಸಿತ್ತು. ಈ ಪ್ರಕರಣದ ಕುರಿತಾಗಿ ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ ನಡೆಯಲಿದೆ.