ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೋಲಾರದಲ್ಲಿ ಬೈಕ್‌ಗೆ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.
ಬಂಗಾರಪೇಟೆ ತಾಲೂಕಿನ ಬೆಂಗನೂರು ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ದೇಶಿಹಳ್ಳಿ ಗ್ರಾಮದ ನಿವಾಸಿ ಮುತ್ತು ಹಾಗೂ ಮಂಡ್ಯದ ನಾಗಮಂಗಲ ಮೂಲದ ರವಿ ಮೃತಪಟ್ಟಿದ್ದಾರೆ.
ಇವರಿಬ್ಬರು ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.