ಹೊಸದಿಗಂತ ವರದಿ,ಕಲಬುರಗಿ:
ಜಿಲ್ಲೆಯ ಸೇಡಂ ತಾಲೂಕಿನ ಇವಣಿ ಬಳಿ ಕೆಟ್ಟು ನಿಂತಿದ್ದ ಗೂಡ್ಸ್ ವಾಹನ ರಿಪೇರಿ ಮಾಡುವಾಗ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪ್ರಶಾಂತ, ವಿಠಲ್, ಮಂಗ್ಲಿ ಮೃತಪಟ್ಟ ಮೂವರು ದುರ್ದೈವಿಗಳು. ಮೃತರು ಬೀದರ್ ಹಾಗೂ ಹೈದರಾಬಾದ್ ಮೂಲದವರಾಗಿದ್ದಾರೆ.
ಕಲಬುರಗಿಯಿಂದ ಸೇಡಂ ಮಾರ್ಗವಾಗಿ ಹೈದ್ರಾಬಾದ್‌ಗೆ ತೆರಳುತ್ತಿದ್ದ ಗೂಡ್ಸ್ ವಾಹನವು
ಇವಣಿ ಬಳಿ ವಾಹನ ಕೆಟ್ಟು ನಿಂತಿದ್ದರಿಂದ ರಿಪೇರಿ ಮಾಡಲು ರಸ್ತೆ ಬದಿ ಪಾರ್ಕ್ ಮಾಡಲಾಗಿತ್ತು.
ಈ ವೇಳೆ ಹಿಂಬದಿಯಿಂದ ಬಂದ ಸಿಮೆಂಟ್ ಟ್ಯಾಂಕರ್ ಡಿಕ್ಕಿಯಾಗಿ ಈ ಅವಘಢ ಸಂಭವಿಸಿದೆ.
ಈ ಕುರಿತು ಮಾಡಬೂಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.