August 22, 2026
Saturday, August 22, 2026
spot_img

ಮಡಿಕೇರಿಯಲ್ಲಿ ಟ್ಯಾಕ್ಸಿಗೆ ಡಿಕ್ಕಿಯಾದ ಟ್ಯಾಂಕರ್‌ : ಭೀಕರ ಅಪಘಾತದಲ್ಲಿ ಚಾಲಕ ಸಾ*ವು

ಹೊಸದಿಗಂತ ವರದಿ ಮಡಿಕೇರಿ:

ಟ್ಯಾಂಕರ್ ಡಿಕ್ಕಿಯಾಗಿ ಟ್ಯಾಕ್ಸಿ ಚಾಲಕನೊಬ್ಬ ಸ್ಥಳದಲ್ಲೇ ಸಾವಿಗೀಡಾದ ಘಟನೆ ಶನಿವಾರ ಬೆಳ್ಳಂಬೆಳಗ್ಗೆ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ನಡೆದಿದೆ.
ಮಡಿಕೇರಿ ನಗರದ ಗಣಪತಿ ಬೀದಿಯ ನಿವಾಸಿ ಸಾಹಿಲ್ (24) ಮೃತ ಚಾಲಕ.

ಮಂಗಳೂರು ರಸ್ತೆಯಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ತಿಮ್ಮಯ್ಯ ಸರ್ಕಲ್ ಬಳಿ ನೂತನ ಪ್ರಯಾಣಿಕರ ತಂಗುದಾಣದ ಮುಂದೆ ರಸ್ತೆಯಲ್ಲಿ ನಿಂತಿದ್ದ ಟ್ಯಾಕ್ಸಿ ಚಾಲಕ ಸಾಹಿಲ್ ಅವರಿಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಸಾಹಿಲ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತದೇಹವನ್ನು ಮಡಿಕೇರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗ್ಗೆ ದಟ್ಟ ಮಂಜು ಕವಿದಿದ್ದ ಕಾರಣ ಅಪಘಾತ ಸಂಭವಿಸಿರಬಹುದು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !