Saturday, August 13, 2022

Latest Posts

ವ್ಯಾನ್‌ ಗೆ ಟ್ಯಾಂಕರ್‌ ಡಿಕ್ಕಿ: ಇಬ್ಬರ ಸಾವು ಆರುಮಂದಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಉತ್ತರ ಪ್ರದೇಶದ ಖತೋಲಿ-ಬುಧಾನಾ ರಸ್ತೆಯಲ್ಲಿ ಪ್ರಯಾಣಿಕರು ಸಾಗುತ್ತಿದ್ದ ವಾಹನಕ್ಕೆ ಟ್ಯಾಂಕರ್‌ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತು ಆರು ಮಂದಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.

ಮೂಲಗಳ ವರದಿಗಳ ಪ್ರಕಾರ, ಸಾಥೇಡಿ ಗಂಗಾ ಕಾಲುವೆ ಬಳಿ ಖತೋಲಿ-ಬುಧಾನ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಇಬ್ಬರು ವ್ಯಾನ್ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಏತನ್ಮಧ್ಯೆ, ಗಾಯಗೊಂಡ ಆರು ಪ್ರಯಾಣಿಕರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಲಾಗಿದೆ. ಮೃತರನ್ನು ಹಫೀಜ್ ಶಾಹಿದ್ (60) ಮತ್ತು ಜಯವತಿ (50) ಎಂದು ಗುರುತಿಸಲಾಗಿದೆ.

ಅಪಘಾತ ಸಂಭವಿಸಿದ ಕೂಡಲೇ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಆತ ತಲೆಮರೆಸಿಕೊಂಡಿದ್ದಾನೆ. ಚಾಲಕನನ್ನು ಬಂಧಿಸಲು ಪ್ರಯತ್ನ ನಡೆಸಲಾಗುತ್ತಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss