RAPE | ಬಾಂಗ್ಲಾದೇಶದ ಮಹಿಳೆ ಮೇಲೆ ಅತ್ಯಾಚಾರ, ಕೊಲೆ ಆರೋಪ: ಟ್ಯಾಂಕರ್ ಚಾಲಕ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕಲ್ಕೆರೆ ನಿರ್ಜನ ಪ್ರದೇಶದಲ್ಲಿ ಬಾಂಗ್ಲಾದೇಶ ಮೂಲದ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬಳಿಕ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ಯಾಂಕರ್ ಚಾಲಕನೊಬ್ಬನನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಕೊತ್ತನೂರಿನ ನಿವಾಸಿ ಮತ್ತು ಬಾಗಲಕೋಟೆ ಮೂಲದ ಮುದುಕಪ್ಪ ಎಂಬಾತನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ಜ.23ರಂದು ಬಾಂಗ್ಲಾ ಮೂಲದ ನಜ್ಮಾ (28) ಎಂಬಾಕೆಯನ್ನು ಕಲ್ಕೆರೆ ಕೆರೆಯ ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿ ಬಳಿಕ ಉಸಿರುಗಟ್ಟಿಸಿ ಹತ್ಯೆ ಮಾಡಿ, ಮುಖದ ಮೇಲೆ ಕಲ್ಲು ಎತ್ತಿಹಾಕಿ ಪರಾರಿಯಾಗಿದ್ದ. ಜನವರಿ 24 ರ ಬೆಳಿಗ್ಗೆ, ದಾರಿಹೋಕರೊಬ್ಬರು ಶವವನ್ನು ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನಜ್ಮಾ ಕಲ್ಕೆರೆಯ ಅಪಾರ್ಟ್‌ಮೆಂಟ್‌ನಲ್ಲಿ ಮನೆಯ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು. ಅಪಾರ್ಟ್‌ಮೆಂಟ್‌’ಗೆ ನೀರಿನ ಕ್ಯಾನ್ ಗಳನ್ನು ಪೂರೈಸುತ್ತಿದ್ದ ಆರೋಪಿ, ಈ ವೇಳೆ ನಜ್ಮಾ ಅವರೊಂದಿಗೆ ಮಾತನಾಡುತ್ತಿದ್ದ. ಅವರು ವಾಸವಿದ್ದ ಶೆಡ್, ಕೆಲಸ ಮಾಡುತ್ತಿದ್ದ ಮನೆಯ ಬಗ್ಗೆ ತಿಳಿದುಕೊಂಡಿದ್ದ.

ಜನವರಿ 23 ರಂದು, ನಜ್ಮಾ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ, ಆರೋಪಿಗಳು ಆಕೆಯನ್ನು ಹಿಂಬಾಲಿಸಿಕೊಂಡು ಹೋಗಿದ್ದು, ಕಲ್ಕೆರೆ ಬಳಿಯ ನಿರ್ಜನ ಪ್ರದೇಶಕ್ಕೆ ಎಳೆದುಕೊಂಡು ಹೋಗಿ, ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾನೆ.

ಈ ಸಂಬಂಂಧ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಾವಳಿಗಳು ಮತ್ತು ಮರಣೋತ್ತರ ಪರೀಕ್ಷಾ ವರದಿಯ ಆಧಾರದ ಮೇಲೆ, ಆರೋಪಿಯನ್ನು ಬಂಧನಕ್ಕೊಳಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆತನನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!