ರಸ್ತೆಯಲ್ಲೇ ಟ್ಯಾಂಕರ್ ಸ್ಫೋಟ, 12 ಮಂದಿ ಸಜೀವ ದಹನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೈಜಿರಿಯಾದ ಕೋಗಿ ಕೌನ್ಸಿಲ್ ಪ್ರದೇಶದ ಬಳಿ ರಸ್ತೆಯಲ್ಲಿ ಪೆಟ್ರೊಲ್ ಟ್ಯಾಂಕರ್ ಸ್ಫೋಟಗೊಂಡು 12 ಮಂದಿ ಸಜೀವ ದಹನವಾಗಿದ್ದಾರೆ.

ಟ್ಯಾಂಕರ್ ಬ್ರೇಕ್ ಫೇಲ್ ಆಗಿದ್ದು, ವಾಹನವೊಂದಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಪೆಟ್ರೋಲ್ ಟ್ಯಾಂಕರ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವೇ ಸ್ಫೋಟಗೊಂಡಿದೆ.

ಪೆಟ್ರೊಲ್ ಟ್ಯಾಂಕರ್ ಸ್ಫೋಟಗೊಂಡ ಪರಿಣಾಮ ಇತರ ವಾಹನಗಳಿಗೂ ಬೆಂಕಿ ತಗುಲಿದೆ. 12 ಮಂದಿ ಸ್ಥಳದಲ್ಲೇ ಸಜೀವ ದಹನವಾಗಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!