ಹೊಸದಿಗಂತ ವರದಿ, ಮಡಿಕೇರಿ:
ಟ್ಯಾಂಕರ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವಿಗೀಡಾಗಿರುವ ಘಟನೆ ಕುಶಾಲನಗರ ಸಮೀಪದ ಗುಡ್ಡೆಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಸುಂಟಿಕೊಪ್ಪದ ಕಾರ್ಮಿಕ ರಾಜು (ರಾಜಣ್ಣ) ಎಂಬವರೇ ಸಾವಿಗೀಡಾದವರು.
ಕುಶಾಲನಗರ ಕಡೆಯಿಂದ ಸುಂಟಿಕೊಪ್ಪಕ್ಕೆ ಬರುತ್ತಿದ್ದ ಲಾರಿ ಮತ್ತು ಮಡಿಕೇರಿ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಈ ಸಂದರ್ಭ ಲಾರಿಯಲ್ಲಿದ್ದ ಕಾರ್ಮಿಕ ರಾಜು (ರಾಜಣ್ಣ) ಎಂಬವರ ಎರಡೂ ಕಾಲುಗಳು ಮುರಿದ ಪರಿಣಾಮ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಲಾರಿ ಚಾಲಕ 7ನೇ ಹೊಸಕೋಟೆಯ ಜಬ್ಬಾರ್ ಎಂಬವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.