ಮದುವೆಯಾಗಿ ಮೂರೇ ತಿಂಗಳಿಗೆ ಮಸಣ ಸೇರಿದ ತನುಶ್ರೀ: ಆಸ್ತಿಗಾಗಿ ನಡೆಯಿತಾ ಮಂಗಳಮುಖಿ ಕೊಲೆ?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಂಗಮ ಎನ್ ಜಿಓ ಮಾಲಕಿ, ಕೋಟಿ ಕೋಟಿ ಆಸ್ತಿಯ ಒಡತಿ, ಮಂಗಳಮುಖಿ ತನುಶ್ರೀ ಮದುವೆ ಮಾಡಿಕೊಂಡು ಮೂರು ತಿಂಗಳಿಗೆ ಕೊಲೆ ಆಗಿದ್ದಾರೆ.

ಕೆ.ಆರ್.ಪುರದ ಬಸವೇಶ್ವರ ನಗರದ ಗಾಯಿತ್ರಿ ಲೇಔಟ್‌ನ ಮನೆಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಇನ್ನು ಮಂಗಳಮುಖಿ ತನುಶ್ರೀ ಅವರ ಕೊಲೆ ಕಳೆದ ಮೂರು ದಿನಗಳ ಹಿಂದೆಯೇ ಆಗಿದ್ದು, ತಡವಾಗಿ ಬೆಳಕಿಗೆ ಬಂದಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಆಸ್ತಿಗಾಗಿ ಪತಿಯೇ ಹತ್ಯೆ ಮಾಡಿದ್ದಾರೆ ಎಂಬ ಅನುಮಾನಗಳು ಹುಟ್ಟಿಕೊಂಡಿದೆ. ಅದಕ್ಕೆ ಕಾರಣ, ತನುಶ್ರೀ ಹತ್ಯೆಯ ಬಳಿಕ ಪತಿ ಜಗನ್ನಾಥ್ ಹಾಗೂ ಮನೆ ಕೆಲಸದ ಮಹಿಳೆ ನಾಪತ್ತೆಯಾಗಿದ್ದಾರೆ.

ಈ ಪ್ರಕರಣದ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!