ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಪ್ರಾಯೋಗಿಕವಾಗಿ ಹಾರಾಟ ನಡೆಸಿದ ತಪಸ್-201, ಕಾರವಾರದ ನೌಕಾನೆಲೆಯಿಂದ 148 ಕಿ.ಮೀ ದೂರ ಇರುವ ಐಎನ್‌ಎಸ್ ಸುಭದ್ರದಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ.
ಭಾರತೀಯ ನೌಕಾಪಡೆ ಹಾಗೂ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಸಹಭಾಗಿತ್ವದಲ್ಲಿ ನಡೆದ ಮಾನವ ರಹಿತ ತಪಸ್ ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿಯಾಗಿದೆ.
ಏರಿಯಲ್ ವೆಹಿಕಲ್‌ನ ಸಾಮರ್ಥ್ಯ ಪರೀಕ್ಷೆಗಾಗಿ 285 ಕಿ.ಮೀ ದೂರ ಇರುವ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್‌ನಿಂದ ಹಾರಾಟಕ್ಕೆ ಚಾಲನೆ ನೀಡಲಾಗಿತ್ತು. 20 ಸಾವಿರ ಅಡಿ ಎತ್ತರದಲ್ಲಿ ತಪಸ್ ಹಾರಾಟ ನಡೆಸಿದ್ದು, ಸತತವಾಗಿ 3:30 ಗಂಟೆಗಳ ಹಾರಾಟ ನಡೆಸಿದೆ.
ಬೆಂಗಳೂರು ಮೂಲದ ಏರೋನಾಟಿಕಲ್ ಡೆವಲಪ್‌ಮೆಂಟ್ ಎಸ್ಟಾಬ್ಲಿಶ್‌ಮೆಂಟ್ ತಪಸ್‌ನ್ನು ವಿನ್ಯಾಸಗೊಳಿಸಿದೆ,