February 17, 2026
Tuesday, February 17, 2026
spot_img

ಬಾಂಗ್ಲಾದೇಶ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಇಂದು ಬಿಎನ್‌ಪಿ ಸಂಸದರೊಂದಿಗೆ ಪ್ರಮಾಣವಚನ ಸ್ವೀಕರಿಸಿದರು.

ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ ಸಚಿವ ಸಂಪುಟಕ್ಕೆ ಪ್ರಮಾಣವಚನ ಬೋಧಿಸಿದರು. ಈ ಸಮಾರಂಭದಲ್ಲಿ . ಸುಮಾರು 1,200 ಜನ ಅತಿಥಿಗಳು ಇದರಲ್ಲಿ ಪಾಲ್ಗೊಂಡಿದ್ದರು.

ಭಾರತದ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ತಾರಿಕ್ ರೆಹಮಾನ್ ಅವರ ಪ್ರಮಾಣವಚನ ಸಮಾರಂಭದಲ್ಲಿ ಭಾರತವನ್ನು ಪ್ರತಿನಿಧಿಸಿದರು. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಮತ್ತು ಲೋಕಸಭೆಯ ಪ್ರಧಾನ ಕಾರ್ಯದರ್ಶಿ ಉತ್ಪಲ್ ಕುಮಾರ್ ಸಿಂಗ್ ಕೂಡ ಬಿರ್ಲಾ ಅವರೊಂದಿಗೆ ತೆರಳಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !