ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ನಿರ್ದೇಶಕ ತರುಣ್ ಸುಧೀರ್, ನಟಿ ಸೋನಲ್ ಮೊಂಥೆರೋ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.
ಆಗಸ್ಟ್ 11ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬೆನ್ನಲ್ಲೇ ಈ ಬ್ಯೂಟಿಫುಲ್ ಜೋಡಿ ಮತ್ತೊಮ್ಮೆ ವಿವಾಹವಾಗಿದೆ.
ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ