ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರಟಗಿ ತಾಲೂಕಿನ ಬರಗೂರು ಕ್ರಾಸ್ ಬಳಿ ನರೇಗಾ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟಾಟಾ ಏಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ 31 ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಬರಗೂರು ಕ್ರಾಸ್ ಬಳಿ ವಾಹನ ಪಲ್ಟಿಯಾಗಿದೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹುಬ್ಬಳ್ಳಿ ಹಾಗೂ ಕೊಪ್ಪಳದ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ, ಇನ್ನು 28 ಜನರಿಗೆ ಸಣ್ಣಪುಟ್ಟಗಾಯಗಳಾಗಿದ್ದು ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.