Friday, August 12, 2022

Latest Posts

 ಟಾಟಾಏಸ್- ಗೂಡ್ಸ್ ವಾಹನ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………

ಹೊಸ ದಿಗಂತ ವರದಿ,  ವಿಜಯಪುರ:

ಟಾಟಾಏಸ್ ಹಾಗೂ ಗೂಡ್ಸ್ ವಾಹನ ಡಿಕ್ಕಿಯಾಗಿ, ಟಾಟಾಏಸ್ ವಾಹನದಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾದ ಘಟನೆ ವಿಜಯಪುರ ತಾಲೂಕಿನ‌ ಅರಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದಿದೆ.
ಮೃತಪಟ್ಟವರನ್ನು ಲೋಣಿಯ ಬುದ್ದಯ್ಯ ರಾಚಯ್ಯ ಹಿರೇಮಠ (70), ಪ್ರಥಿಕ ರಾಚಯ್ಯ ಹಿರೇಮಠ (27), ಸಿದ್ರಾಮ ದಾನಯ್ಯ ಹಿರೇಮಠ (22) ಎಂದು ಗುರುತಿಸಲಾಗಿದೆ.
ಇವರು ಟಾಟಾಏಸ್ ವಾಹನದಲ್ಲಿ ತೆರಳುತ್ತಿದ್ದಾಗ, ಈ ಅಪಘಾತವಾಗಿದ್ದು, ಮೂವರಿಗೆ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss