ಹೊಸದಿಗಂತ ಡಿಜಿಟಲ್ ಡೆಸ್ಕ್:
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಟಾಟಾ ಏಸ್ ವಾಹನ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ.
ಟಾಟಾ ಏಸ್ ವಾಹನದ ಟೈರ್ ಬ್ಲಾಸ್ಟ್ ಆಗಿ ವಾಹನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿದ್ದು, ಸ್ಥಳದಲ್ಲೇ ಇಬ್ಬರು ಮೃತಪಟ್ಟಿದ್ದರೆ, ಇಬ್ಬರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಹರಿಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.