ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ವರದಿ, ಉಡುಪಿ:
ಕಾಪು ಸಮೀಪದ ಸಮುದ್ರದಲ್ಲಿ ಟಗ್ ಬೋಟ್ ನಲ್ಲಿ ಸಿಲುಕಿರುವವರೊಂದಿಗೆ ಸಂಪರ್ಕ ಸಾಧಿಸಿ, ಧೈರ್ಯದಿಂದ ಇರಲು ಹೇಳಿದ್ದೇವೆ. ರಕ್ಷಣಾ ಕಾರ್ಯಾಚರಣೆಗೆ ಕ್ರಮಕೈಗೊಳ್ಳಾಗುತ್ತಿದ್ದು ಹವಾಮಾನ ವೈಪರೀತ್ಯಗಳಿಂದ ತೊಡಲಾಗಿದೆ ಎಂದು ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಬಿ. ಸದಾಶಿವ ಪ್ರಭು ತಿಳಿಸಿದ್ದಾರೆ.
‘ಹೊಸದಿಗಂತ’ದೊಂದಿಗೆ ಮಾತನಾಡಿದ ಅವರು, ಸಂತ್ರಸ್ತರೆಲ್ಲರೂ ಎಂಆರ್ಪಿಎಲ್ ಸಂಸ್ಥೆಯ ಗುತ್ತಿಗೆ ನೌಕರರು. ಇದೀಗ ಎಂಆರ್ಪಿಎಲ್ ಸಂಸ್ಥೆಯೇ ಏರ್ ಲಿಫ್ಟ್ ಮಾಡುವುದಕ್ಕೆ ಪ್ರಯತ್ನಿಸುತ್ತಿದೆ. ಹೆಲಿಕಾಪ್ಟರ್ ಕರೆಸಿ, ಸಂತ್ರಸ್ತರ ರಕ್ಷಣೆಗೆ ಕ್ರಮಕೈಗೊಳ್ಳುತ್ತಿದೆ. ನಾವು ಮೊಬೈಲ್ ಫೋನ್ ಮೂಲಕ ಸಂಪರ್ಕ ಸಾಧಿಸಿದ್ದೇವೆ. ಅಲೆಗಳ ಅಬ್ಬರ ಹೆಚ್ಚಾದರೆ ಸ್ವಯಂ ರಕ್ಷಣೆಯ ಕುರಿತು ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.
ಸದ್ಯ ಕೋಸ್ಟ್ ಗಾರ್ಡ್ ನೌಕೆ ಸ್ಥಳದಲ್ಲಿದ್ದು ಪರಿಸ್ಥಿತಿಯ ನಿಗಾ ವಹಿಸುತ್ತಿದೆ. ಸಮುದ್ರದ ಅಬ್ಬರ ತೀವ್ರವಾಗಿರುವುದರಿಂದ ಟಗ್ ಸಮೀಪಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ ಎಂದು ಎಡಿಸಿ ಸದಾಶಿವ ಪ್ರಭು ಮಾಹಿತಿ ನೀಡಿದ್ದಾರೆ.