Thursday, August 11, 2022

Latest Posts

ತೌಕ್ತೆ ಚಂಡಮಾರುತ ಅಬ್ಬರ: ಗುಜರಾತ್, ಮಹಾರಾಷ್ಟ್ರ ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಅಮಿತ್ ಶಾ ಸಭೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸದಿಗಂತ ಆನ್ ಲೈನ್ ಡೆಸ್ಕ್:

ಗುಜರಾತ್ ಹಾಗೂ ಮಹಾರಾಷ್ಟ್ರದಲ್ಲಿ ಪ್ರಬಲ ತೌಕ್ತೆ ಚಂಡಮಾರುತ ಅಪ್ಪಳಿಸಿದ್ದು, ಮುಖ್ಯಮಂತ್ರಿಗಳ ಜೊತೆ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಿದ್ದಾರೆ.
ಚಂಡಮಾರುತದ ಹಿನ್ನೆಲೆ ರಾಜ್ಯ ಸರ್ಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಕಠಿಣ ಪರಿಸ್ಥಿತಿಯಲ್ಲಿ ಕೇಂದ್ರ ಸರ್ಕಾರ ರಾಜ್ಯಗಳ ಜೊತೆ ಇರುತ್ತದೆ ಎಂದು ಭರವಸೆ ನೀಡಿದರು.
ಮಹಾರಾಷ್ಟ್ರ ಮತ್ತು ಗುಜರಾತ್ ಸಿಎಂಗಳಿಗೆ ಚಂಡಮಾರುತ, ಭೂಕುಸಿತದ ನಂತರ ವಿದ್ಯುತ್ ಸರಬರಾಜನ್ನು ಕಾಪಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಚಂಡಮಾರುತದ ವೇಳೆ ಪರಿಸ್ಥಿತಿ ನಿಭಾಯಿಸಲು ವಾಯುಪಡೆ, ನೌಕಾಪಡೆ ಮತ್ತು ಎನ್‌ಡಿಆರ್‌ಎಫ್‌ನ ಸಹಾಯ ಪಡೆಯುವಂತೆ ಶಾ ರಾಜ್ಯಗಳಿಗೆ ತಿಳಿಸಿದ್ದಾರೆ.
ಈ ವೇಳೆ ಕೊರೋನಾ ಸೋಂಕಿತರನ್ನು ಸುರಕ್ಷಿತವಾಗಿರುವ ಆಸ್ಪತ್ರೆಗಳಿಗೆ ಸ್ಥಳಾಂತರಿಸುವಂತೆ ತಿಳಿಸಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss