ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ತೌಕ್ತೆ ಚಂಡಮಾರುತ ಇಂದು ಸಂಜೆಯ ವೇಳೆಗೆ ಗುಜರಾತ್ ತಲುಪಲಿದ್ದು, ಇಂದಿನಿಂದ ಮೇ.20ರವರೆಗೆ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ತಗ್ಗು ಪ್ರದೇಶದಲ್ಲಿರುವ ಸುಮಾರು 1.50 ಲಕ್ಷ ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಈಗಾಗಲೇ 5 ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ 100 ತಂಡಗಳನ್ನು ನಿಯೋಜಿಸಿದೆ. ಸೌರಾಷ್ಟ್ರ, ಕಚ್, ಪೊರಬಂದರ್, ರಾಜ್ಕೋಟ್ನಲ್ಲಿ ಅಧಿಕ ಮಳೆಯಾಗಲಿದ್ದು, ಈ ವೇಳೆ ಗಾಳಿ ಗಂಟೆಗೆ 155 ರಿಂದ 165 ಕಿ.ಮೀ. ವೇಗದಲ್ಲಿರುತ್ತದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇಂದು ಮಾಲ್ಡವೀಸ್ ಪ್ರದೇಶ ಮತ್ತು ಹಿಂದೂ ಮಹಾಸಾಗರದ ಸಮಭಾಜಕ ಪ್ರದೇಶದಲ್ಲಿ ತಂಪನೆಯ ವಾತಾವಣವಿರಲಿದ್ದು, ಪ್ರತಿ ಗಂಟೆಗೆ 45-55 ಕಿ.ಮೀ.ನಿಂದ 65 ಕಿ.ಮೀ. ವೇಗದಲ್ಲಿ ಬಿರುಗಾಳಿ ಸಾಗಲಿದೆ. ತೌಕ್ತೆ ಚಂಡಮಾರುತದ ಪ್ರಭಾವ ಗುಜರಾತ್ ತೀರದಲ್ಲಿ ಯಾವುದೇ ಮೀನುಗಾರಿಕಾ ಚಟುವಟಿಕೆ ನಡೆಸಬಾರದು ಎಂದು ಸೂಚನೆ ನೀಡಲಾಗಿದೆ.