Wednesday, August 10, 2022

Latest Posts

ಆರು ರಾಜ್ಯಗಳಲ್ಲಿ ‘ತೌಕ್ತೆ’ ಅಬ್ಬರ: ಕೇಂದ್ರದಿಂದ 100 ಎನ್ ಡಿಆರ್ ಎಫ್ ತಂಡಗಳ ನಿಯೋಜನೆ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
……………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಭಾರತದ ಆರು ರಾಜ್ಯಗಳಲ್ಲಿ ತೌಕ್ತೆ ಚಂಡಮಾರುತದ ಆರ್ಭಟಿಸುತ್ತಿದ್ದು, ಈ ಹಿನ್ನೆಲೆ ಕೇಂದ್ರ ಸರ್ಕಾರ 100 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಿದೆ.
ಈ ಹಿಂದೆ ಚಂಡಮಾರುತದ ನಿರ್ವಹಣೆಗೆ ರವಾನಿಸಲಾಗಿರುವ ಎನ್ ಡಿಆರ್‌ಎಫ್ ತಂಡಗಳ ಪ್ರಮಾಣವನ್ನು ಇಮ್ಮಡಿಗೊಳಿಸಲಾಗಿದ್ದು, ಒಟ್ಟು 100 ತಂಡಗಳನ್ನು ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರಗಳಿಗೆ ರವಾನಿಸಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಎನ್ ಡಿಆರ್ ಎಫ್ ಡೈರೆಕ್ಟರ್ ಜನರಲ್ ಎಸ್ ಎನ್ ಪ್ರಧಾನ್ ಅವರು, ಚಂಡಮಾರುತ ಪೀಡಿತ ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರಗಳಲ್ಲಿನ ಎನ್ ಡಿಆರ್ ಎಫ್ ತಂಡಗಳನ್ನು ದ್ವಿಗುಣಗೊಳಿಸಲಾಗಿದೆ. ಆ ಮೂಲಕ ಒಟ್ಟು 100 ತಂಡಗಳು ವಿವಿಧ ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಲಿವೆ ಎಂದು ಹೇಳಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ಚಂಡಮಾರುತ ಇನ್ನಷ್ಟು ವೇಗ ಪಡೆದುಕೊಳ್ಳಲ್ಲಿದ್ದು, ಪರಿಣಾಮ ಈ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆ ಮುನ್ಸೂಚನೆಯನ್ನು ಆಧರಿಸಿ ರಕ್ಷಣಾ ತಂಡಗಳ ಪ್ರಮಾಣವನ್ನು ದ್ವಿಗುಣಗೊಳಿಸಲಾಗಿದೆ. ಈ 100 ತಂಡಗಳಲ್ಲಿ 42 ತಂಡಗಳನ್ನು ಈ ಆರು ರಾಜ್ಯಗಳಲ್ಲಿ ನಿಯೋಜಿಸಲಾಗಿದ್ದು, 26 ತಂಡಗಳನ್ನು ಸರ್ವಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ. 32 ತಂಡಗಳು ಏರ್ ಲಿಫ್ಟ್ ಕಾರ್ಯಾಚರಣೆ ಮತ್ತು ಇತರೆ ಅಗತ್ಯ ವಸ್ತುಗಳ ಪೂರೈಕೆಗಾಗಿ ನಿಯೋಜನೆಗೊಂಡಿವೆ ಎಂದು ಹೇಳಿದರು.
ಇನ್ನು ಕೇಂದ್ರ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳಲ್ಲಿ ತೌಕ್ತೆ ಚಂಡಮಾರತ ಮತ್ತಷ್ಟು ವೇಗವಾಗಿ ಅಪ್ಪಳಿಸಲಿದ್ದು, ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಎಚ್ಚರಿಕೆ ನೀಡಿದೆ. ಹೀಗಾಗಿ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿ ಕೇರಳ, ಕರ್ನಾಟಕ, ತಮಿಳುನಾಡು, ಗುಜರಾತ್, ಗೋವಾ ಮತ್ತು ಮಹಾರಾಷ್ಟ್ರಗಳಲ್ಲಿ ಭಾರಿ ಪ್ರಮಾಣದ ಮಳೆಯಾಗಲಿದೆ ಎಂದು ಹೇಳಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss