ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿನಿ ಪ್ರಿಯರಿಂದ ಮೆಚ್ಚುಗೆ ಪಡೆದ ಡೇರ್ಡೆವಿಲ್ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿ ಘೋಷಣೆ ಮಾಡಲಾಗಿದೆ.
ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಸಿನಿಮಾ ಇದಾಗಿದ್ದು, ಸಿಎಂ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
25 ದಿನ ಯಶಸ್ವೀ ಪ್ರದರ್ಶನ ಕಂಡ ಸಿನಿಮಾ ಇದೀಗ 50 ನೇ ದಿನದತ್ತ ಮುನ್ನುಗ್ಗುತ್ತಿದೆ, ಈ ವೇಳೆ ತೆರಿಗೆ ವಿನಾಯಿತಿ ನೀಡಿರುವುದು ಚಿತ್ರತಂಡಕ್ಕೆ ಭಾರೀ ಸಂತಸದ ಸುದ್ದಿಯಾಗಿದೆ.