ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುಗಾದಿ ಹಬ್ಬಕ್ಕೆ ಸರ್ಕಾರ ಶಾಕ್ ನೀಡಿದೆ. ಐ ಲವ್ ಯು ನಂದಿನಿ ಅಂತಾ ಜಾಹೀರಾತು ಕೊಡ್ತಾ ಇದ್ರು. ಈಗ ಐ ಹೇಟ್ ಯು ನಂದಿನಿ ಅಂತಾ ಜಾಹೀರಾತು ಕೊಡಬೇಕು ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಹಾಲಿನ ದರ, ವಿದ್ಯುತ್ ದರ ಏರಿಕೆ ಕುರಿತು ಮಾತನಾಡಿ, ಕಾಕಾಪಾಟೀಲ್‌ಗೂ ಫ್ರೀ, ಮಹದೇವಪ್ಪನಿಗೂ ಫ್ರೀ, ನಿನ್ ಹೆಂಡ್ತಿಗೂ ಫ್ರೀ, ನನ್ ಹೆಂಡ್ತಿಗೂ ಫ್ರೀ ಅಂತಾ ಸಿದ್ದರಾಮಯ್ಯ ಹೇಳುತ್ತಿದ್ದರು. ಆದರೆ ಈಗ ನಿನ್ ಹೆಂಡ್ತಿಗೂ ಟ್ಯಾಕ್ಸ್, ನನ್ ಹೆಂಡ್ತಿಗೂ ಟ್ಯಾಕ್ಸ್ ಅನ್ನಬೇಕು ಎಂದು ವ್ಯಂಗ್ಯವಾಡಿದ್ದಾರೆ.
ಬಜೆಟ್ ಆಗಿ 10 ದಿನನೂ ಆಗಿಲ್ಲ. ಸರ್ಕಾರದ ತಿಥಿಯೂ ಆಗಿಲ್ಲ. ಆಗಲೇ ದರ ಏರಿಕೆ ಮಾಡಿದ್ದಾರೆ. ಸಿದ್ದರಾಮಯ್ಯ ಬಂದ ಮೇಲೆ ಎಲ್ಲದಕ್ಕೂ ದರ ಏರಿಕೆ ಆಗಿದೆ. ಇದು ಕಾಂಗ್ರೆಸ್‌ನ ಮನೆ ಹಾಳು ಕೆಲಸ ಎಂದು ವಾಗ್ದಾಳಿ ನಡೆಸಿದ್ದಾರೆ.