ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೊಸ ಪಾರ್ಕಿಂಗ್ ನಿಯಮ ಹಾಕಲಾಗಿದೆ. ಇದರ ವಿರುದ್ಧ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ.
ಸಾದಹಳ್ಳಿ ಟೋಲ್ ಬಳಿ ಪ್ರತಿಭಟನೆ ನಡೆದಿದ್ದು, ಹಿಂಸಾಚಾರಕ್ಕೆ ತಿರುಗಿತ್ತು. ಒಕ್ಕೂಟದ ಸಂಸ್ಥಾಪಕ ಮತ್ತು ರಾಜ್ಯ ಅಧ್ಯಕ್ಷ ಜಿ. ನಾರಾಯಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.
ಕ್ಯಾಬ್ ಚಾಲಕರು ರಸ್ತೆ ತಡೆ ನಡೆಸಿದ್ದಾರೆ. ಈ ವೇಳೆ ಕಲ್ಲು ತೂರಾಟ ನಡೆದಿದೆ. ಪ್ರತಿಭಟನೆ ಜೋರಾದ ನಂತರ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

