June 15, 2026
Monday, June 15, 2026
spot_img

ಟಿಸಿಎಸ್ ಪ್ರಕರಣ: ಆರೋಪಿ ನಿದಾ ಖಾನ್‌ಗೆ ನ್ಯಾಯಾಂಗ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಾಸಿಕ್ ನ ಟಿಸಿಎಸ್ ಕಚೇರಿಯಲ್ಲಿ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಬಲವಂತದ ಮತಾಂತರ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿ ಎಂದು ಹೇಳಲಾಗುತ್ತಿರುವ ನಿದಾ ಖಾನ್ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಮೇ 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ. ಪ್ರಕರಣ ಬೆಳಕಿಗೆ ಬಂದ ಬಳಿಕ ಕೆಲವು ದಿನಗಳಿಂದ ನಿದಾ ಖಾನ್ ತಲೆಮರೆಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ:

ದೂರುದಾರರ ಆರೋಪದ ಪ್ರಕಾರ, ಕಚೇರಿಯಲ್ಲೇ ಧಾರ್ಮಿಕ ಒತ್ತಡ, ಕಿರುಕುಳ ಹಾಗೂ ಮತಾಂತರಕ್ಕೆ ಪ್ರಯತ್ನ ನಡೆದಿತ್ತು ಎನ್ನಲಾಗಿದೆ. ಈ ಸಂಬಂಧ ಹಲವು ಎಫ್‌ಐಆರ್‌ಗಳು ದಾಖಲಾಗಿದ್ದು, ವಿಶೇಷ ತನಿಖಾ ತಂಡ ಪ್ರಕರಣ ಪರಿಶೀಲಿಸುತ್ತಿದೆ.

ಈ ಘಟನೆ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಂಸ್ಥೆಯ ನಾಸಿಕ್ ಘಟಕದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಆರೋಪಗಳು ಹೊರಬಿದ್ದ ನಂತರ ನಿದಾ ಖಾನ್ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಕೆಲ ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ ಎಂದು ಪೊಲೀಸರು

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !