ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸಂಪುಟದಲ್ಲಿ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಪಕ್ಷದ ರಾಜ್ಯಾಧ್ಯಕ್ಷ ಕಿಂಜರಾಪು ಅಚ್ಚಂನಾಯ್ಡು ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ನಿತಿನ್ ಗಡ್ಕರಿ, ರಾಮಮೋಹನ್ ನಾಯ್ಡು ಮತ್ತು ಚಿರಾಗ್ ಪಾಸ್ವಾನ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಂಧ್ರದ ರಾಜ್ಯಪಾಲ ಎಸ್ ಅಬ್ದುಲ್ ನಜೀರ್, ತೆಲಂಗಾಣ ಮಾಜಿ ರಾಜ್ಯಪಾಲ ತಮಿಳಿಸೈ ಸೌಂದರರಾಜನ್ ಮತ್ತು ನಾಯ್ಡು ಅವರ ಪತ್ನಿ ನಾರಾ ಭುವನೇಶ್ವರಿ ಉಪಸ್ಥಿತರಿದ್ದರು.
ಸಿಎಂ ನಾಯ್ಡು ಪ್ರಮಾಣ ವಚನ ಸ್ವೀಕಾರದ ನಂತರ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ ಪ್ರಮಾಣ ವಚನ ಸ್ವೀಕರಿಸಿದರು.