ಟಿಡಿಆರ್​ ಹಗರಣ: ಬೆಂಗಳೂರಿನ 9 ಸ್ಥಳಗಳಲ್ಲಿ ಇಡಿ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್: 

ಟಿಡಿಆರ್​ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲುಯದ (ED) ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಕಂಪನಿಗೆ ಸಂಬಂಧಿಸಿದ ಬೆಂಗಳೂರಿನಲ್ಲಿನ ಒಂಬತ್ತು ಸ್ಥಳಗಳಲ್ಲಿ ಏಕಾಕಾಲಕ್ಕೆ ದಾಳಿ ಮಾಡಿ, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ ವಿರುದ್ಧ ಅಕ್ರಮವಾಗಿ ಟಿಡಿಆರ್​​ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಾಲ್ಮರ್ಕ್ ಮಾಲೀಕ ರತನ್ ಲಾತ್ ಡಿಸಿಆರ್ ಪಡೆದು, 27 ಕೋಟಿಯಷ್ಟು ಟಿಡಿಆರ್​ ಅನ್ನು ಅಕ್ರಮವಾಗಿ ಮಾರಾಟ ಮಾಡಿದ್ದಾರೆ ಎಂಬ ಆರೋಪವಿದೆ. ಈ ಸಂಬಂಧ ಎಸಿಬಿ ಪ್ರಕರಣ ದಾಖಲಿಸಿಕೊಂಡು ತನಿಖೆ‌ ನಡೆಸಿ ಕೋರ್ಟ್​ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ.

ಇದೀಗ ಅಕ್ರಮ ಹಣ ವರ್ಗಾವಣೆ ಕಾಯ್ದೆ-2002ರ ನಿಬಂಧನೆ ಅಡಿಯಲ್ಲಿ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಿಚ್ಮಂಡ್ ರಸ್ತೆಯಲ್ಲಿರುವ ಮೆಸರ್ಸ್ ವಾಲ್ಮಾರ್ಕ್ ರಿಯಾಲ್ಟಿ ಹೋಲ್ಡಿಂಗ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿ, ಕಂಪನಿಯ ನಿರ್ದೇಶಕರು ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ದಾಳಿ ವೇಳೆ ಹಲವು ದಾಖಲೆಗಳನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!