ಹಿಂದು ವಿದ್ಯಾರ್ಥಿಯ ಮಣಿಕಟ್ಟಿನಲ್ಲಿದ್ದ ಧಾರ್ಮಿಕ ದಾರ ಕಟ್‌ ಮಾಡಿದ ಶಿಕ್ಷಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ದಕ್ಷಿಣ ಆಫ್ರಿಕಾದ ಶಿಕ್ಷಕನೊಬ್ಬ ಹಿಂದು ವಿದ್ಯಾರ್ಥಿಯ ಮಣಿಕಟ್ಟಿನಿಂದ ಧಾರ್ಮಿಕ ದಾರವನ್ನು ಕತ್ತರಿಸಿರುವ ಘಟನೆ ನಡೆದಿದೆ.

ಈ ಘಟನೆ ಕಳೆದ ವಾರ ಕ್ವಾಜುಲು-ನಟಾಲ್ ಪ್ರಾಂತ್ಯದ ಡ್ರೇಕೆನ್ಸ್‌ಬರ್ಗ್ ಮಾಧ್ಯಮಿಕ ಶಾಲೆಯಲ್ಲಿ ನಡೆದಿದ್ದು, ವ್ಯಾಪಕ ಖಂಡನೆ ವ್ಯಕ್ತವಾಗಿದೆ.

ಶಾಲೆಯು ಸಾಂಸ್ಕೃತಿಕ ಅಥವಾ ಧಾರ್ಮಿಕ ಚಿಹ್ನೆಗಳನ್ನು ಧರಿಸಲು ಅವಕಾಶ ನೀಡುವುದಿಲ್ಲ ಎಂದು ಹೇಳಿ, ಶಿಕ್ಷಕಿ ಹಿಂದು ವಿದ್ಯಾರ್ಥಿಯ ಮಣಿಕಟ್ಟಿನಿಂದ ಪವಿತ್ರ ದಾರವನ್ನು ಕತ್ತರಿಸಿದ್ದಾರೆ.

ದಕ್ಷಿಣ ಆಫ್ರಿಕಾದ ಹಿಂದೂ ಮಹಾಸಭಾ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಣ ಅಧಿಕಾರಿಗಳಿಗೆ ಒತ್ತಾಯಿಸಿದೆ. ಹಿಂದು ವಿದ್ಯಾರ್ಥಿಯ ಧಾರ್ಮಿಕ ದಾರವನ್ನು ಕತ್ತರಿಸಿದ ಶಿಕ್ಷಕನ ಅಸಂವೇದನಾಶೀಲ ಮತ್ತು ಬೇಜವಾಬ್ದಾರಿ ಕ್ರಮವನ್ನು ಎಸ್‌ಎಎಚ್‌ಎಮ್‌ಎಸ್‌ ಬಲವಾಗಿ ಖಂಡಿಸುತ್ತದೆ ಎಂದು ಸಂಘಟನೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!