Tuesday, September 30, 2025

ಮಳವಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್‌ಗೆ ಸಾರಿಗೆ ಬಸ್ ಡಿಕ್ಕಿ: ಶಿಕ್ಷಕ ಸಾವು

ಹೊಸದಿಗಂತ ವರದಿ,ಮಳವಳ್ಳಿ:

ಸಾರಿಗೆ ಬಸ್‌ವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಕ್ಯಾತೇಗೌಡನದೊಡ್ಡಿ ಬಳಿಯ ರಾಷ್ಟ್ರೀಯ ಹೆದ್ದಾರಿ-209ರಲ್ಲಿ ನಡೆದಿದೆ.

ತಾಲ್ಲೂಕಿನ ಮಾರಗೌಡನಹಳ್ಳಿ ಗ್ರಾಮದ ಎಂ.ಡಿ.ಸತೀಶ್ (36) ಮೃತ ದುರ್ದೈವಿ. ಶಿಡ್ಲಘಟ್ಟದಲ್ಲಿನ ಬಿಜಿಎಸ್ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಡಿ.ಸತೀಶ್ ಶಾಲೆ ರಜೆ ಹಿನ್ನೆಲೆಯಲ್ಲಿ ತಮ್ಮ ಗ್ರಾಮಕ್ಕೆ ಆಗಮಿಸಿದ್ದರು.

ಕೆಲಸ ನೀಮಿತ ಬೈಕ್‌ನಲ್ಲಿ ಮಳವಳ್ಳಿಯಿಂದ ತಮ್ಮ ಸ್ವಗ್ರಾಮಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಎದುರಿನಿಂದ ಬಂದ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.