April 29, 2026
Wednesday, April 29, 2026
spot_img

SHOCKING | ಪಾಠ ಮಾಡುವಾಗಲೇ ಹೃದಯಾಘಾತ, ಮಕ್ಕಳೆದುರೇ ಪ್ರಾಣ ಬಿಟ್ಟ ಶಿಕ್ಷಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಪಾಠ ಮಾಡುವಾಗಲೇ ಶಿಕ್ಷಕರೊಬ್ಬರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಹಾಸನದ ಅರಕಲಗೂಡಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ಸರ್ಕಾರಿ ಶಾಲೆಯ ಮುಖ್ಯಶಿಕ್ಷಕರೊಬ್ಬರು ಪಾಠ ಮಾಡುವಾಗಲೇ ಮೃತಪಟ್ಟಿದ್ದಾರೆ. ಕೇರಳಾಪುರ ಗ್ರಾಮದ ಸತೀಶ್‌ ಮೃತರು. ಮಕ್ಕಳಿಗೆ ಪಾಠ ಮಾಡುವಾಗ ಏಕಾಏಕಿ ಅಸ್ವಸ್ಥರಾಗಿ ಸ್ಥಳದಲ್ಲಿಯೇ ಕುಸಿದು ಬಿದ್ದಿದ್ದಾರೆ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸ್ಥಳಕ್ಕೆ ಧಾವಿಸಿ ಆಂಬುಲೆನ್ಸ್‌ಗೆ ಕರೆ ಮಾಡಿದ್ದಾರೆ.

ಆದರೆ ತೀವ್ರ ಹೃದಯಾಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಣೆ ಮಾಡಿದ್ದಾರೆ. ಕಣ್ಣ ಮುಂದೆಯೇ ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೆ ದುಃಖ ಉಮ್ಮಳಿಸಿ ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !