ಶಿಕ್ಷಕರ ಅರ್ಹತಾ ಪರೀಕ್ಷೆಯ ಫಲಿತಾಂಶ ಪ್ರಕಟ: ಸಚಿವ ನಾಗೇಶ್ ಮಾಹಿತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ರಾಜ್ಯದಲ್ಲಿ ನಡೆದ ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಫಲಿತಾಂಶವನ್ನು ಕೆಲ ಹೊತ್ತಿನಲ್ಲಿ ಪ್ರಕಟಿಸಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಮಾಹಿತಿ ನೀಡಿದ್ದಾರೆ .
ಪತ್ರಿಕೆ 1 ರಲ್ಲಿ 20,070 ಅಭ್ಯರ್ಥಿಗಳು ಹಾಗೂ ಪತ್ರಿಕೆ 2ರಲ್ಲಿ 41,857 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.schooleducation.kar.nic.in ಭೇಟಿ ನೀಡಿ ಪರಿಶೀಲಿಸಬಹುದು.
ನ. 06 ರಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!