January16, 2026
Friday, January 16, 2026
spot_img

ಸಣ್ಣ ಕಾರಣಕ್ಕೆ ವಿದ್ಯಾರ್ಥಿಯನ್ನು ಕತ್ತಲು ಕೋಣೆಯಲ್ಲಿ ಕೂಡಿಹಾಕಿ ಪೈಪ್‌ನಿಂದ ಬಾರಿಸಿದ ʼಶಿಕ್ಷೆʼಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಎರಡು ದಿನ ಕ್ಲಾಸಿಗೆ ಬರದಿದ್ದಕ್ಕೆ ವಿದ್ಯಾರ್ಥಿಯನ್ನು ಕತ್ತಲು ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್​ ನಿಂದ ಹೊಡೆದು ಚಿತ್ರಹಿಂಸೆ ಕೊಟ್ಟಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯೊಂದಲ್ಲಿ ನಡೆದಿದೆ.

ಶಿಕ್ಷಕನ ಈ ಕೃತ್ಯದಿಂದ ಐದನೇ ತರಗತಿ ವಿದ್ಯಾರ್ಥಿ ಭಯಗೊಂಡು ನರಳಾಡುತ್ತಿದ್ದು, ಹಲ್ಲೆ ಬಳಿಕ ಬಾಲಕ ಮನೆಯಲ್ಲಿ ಕಿರುಚಾಡುತ್ತ ಓಡಾಡುತ್ತ ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮಗನ ಈ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದು, ಶಿಕ್ಷಕರ ವಿರುದ್ದ ಆಕ್ರೋಶಗೊಂಡಿದ್ದಾರೆ.

ಸುಂಕದಕಟ್ಟೆಯಲ್ಲಿರುವ ಖಾಸಗಿ ಶಾಲೆಯಲ್ಲಿ ದಿವ್ಯ ದಂಪತಿ ಮಗ ಐದನೇ ತರಗತಿಯಲ್ಲಿ ಓದುತ್ತಿದ್ದಾನೆ‌.ಆದರೆ ಕಳೆದ ವಾರ ಎರಡು ದಿನ ಕ್ಲಾಸ್ ಗೆ ಹೋಗಿರಲಿಲ್ವಂತೆ. ಇಷ್ಟಕ್ಕೆ ಶಾಲೆಯ ಪ್ರಾಂಶುಪಾಲರು ಮತ್ತು ಕೆಲ ಟೀಚರ್ಸ್ ಕ್ಲಾಸ್ ಬಿಟ್ಟ ನಂತರ ಕ್ಲಾಸ್ ರೂಮಿನಲ್ಲಿ ಕೂಡಿಹಾಕಿ ಪಿವಿಸಿ ಪೈಪ್ ನಿಂದ ಬಾಸುಂಡೆ ಬರುವಂತೆ ಹಲ್ಲೆ ಮಾಡಿದ್ದಾರೆ.

ನಂತರ ಡಾರ್ಕ್ ರೂಮ್‌ನಲ್ಲಿ ಕೂಡಿಹಾಕಿ ಚಿತ್ರಹಿಂಸೆ ಕೊಟ್ಟಿದ್ದಾರಂತೆ. ಇದರಿಂದ ದೇಹದ ಕೆಲವು ಭಾಗಗಳಲ್ಲಿ ರಕ್ತ ಹೆಪ್ಪುಗಟ್ಟಿದ್ದು ಆಸ್ಪತ್ರೆಗೆ ಸೇರಿಸಿದ್ದಾರಂತೆ. ಇನ್ನು ಹಲ್ಲೆಯಾದ ನಂತರ ಮನೆಯಲ್ಲಿ ಮಗು ಒಂಥರ ವಿಚಿತ್ರವಾಗಿ ಕಿರುಚಾಡುತ್ತ, ಓಡಾಡುತ್ತಿದ್ದಾನೆ ಎಂದು ಪೋಷಕರು ಆರೋಪಿಸಿದ್ದು, ಮಗುವಿನ ಸ್ಥಿತಿಗೆ ಪೋಷಕರು ಕಂಗಾಲಾಗಿದ್ದಾರೆ.

ಹಲ್ಲೆ ಮಾಡಿದ ನಂತರವೂ ಶಾಲಾ ಆಡಳಿತ ಮಂಡಳಿಯವರು ಒಂದೇ ಒಂದು ಕಾಲ್ ಮಾಡಿ ಮಗುವಿನ ಆರೋಗ್ಯ ವಿಚಾರಿಸಿಲ್ಲ. ಬದಲಾಗಿ ಅ ವಿದ್ಯಾರ್ಥಿಯೇ ಗಾಂಜಾ ಸೇವನೆ ಮಾಡುತ್ತಾನೆ ಎಂದು ತಮ್ಮ ತಪ್ಪು ಮುಚ್ಚಿಕೊಳ್ಳಲು ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಪೋಷಕರು ಹೇಳಿದ್ದಾರೆ.

Must Read

error: Content is protected !!