October 10, 2026
Saturday, October 10, 2026
spot_img

ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಶಿಕ್ಷಕ, ಇಂಥ ಪ್ರೊಫೆಸರ್ಸ್ ಇದ್ರೆ ಸ್ಟೂಡೆಂಟ್ ಕಥೆ ಅಷ್ಟೇ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರತಿಷ್ಠಿತ ಮೆಡಿಕಲ್ ಕಾಲೇಜೊಂದರಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂದಿದೆ. ತರಗತಿ ನಡೆಯುತ್ತಿರುವ ವೇಳೆ ಪ್ರೊಫೆಸರ್ ಒಬ್ಬರು ವಿದ್ಯಾರ್ಥಿನಿಗೆ ಪ್ರಪೋಸ್ ಮಾಡಿದ ಪ್ರಕರಣ ಇದೀಗ ವಿವಾದಕ್ಕೆ ಕಾರಣವಾಗಿದೆ.

ಮಾಹಿತಿ ಪ್ರಕಾರ, ಪ್ರೊಫೆಸರ್ ಅಬ್ದುಲ್ ಎಂಬವರು ಕ್ಲಾಸ್‌ನಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ನೀಡಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ವರ್ತನೆಗೆ ಅಸಮಾಧಾನಗೊಂಡ ವಿದ್ಯಾರ್ಥಿನಿ ತಕ್ಷಣವೇ ಪ್ರಶ್ನಿಸಿ, ಆಕ್ರೋಶದಲ್ಲಿ ಪ್ರತಿಕ್ರಿಯೆ ನೀಡಿದ್ದಾಳೆ.

ಈ ಘಟನೆ ನಂತರ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಇತರ ವಿದ್ಯಾರ್ಥಿಗಳೂ ಪ್ರೊಫೆಸರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕ್ಯಾಂಪಸ್‌ನಲ್ಲೇ ಅವರನ್ನು ಹಿಂಬಾಲಿಸಿ ಹೊಡೆದಿರುವ ಘಟನೆ ವರದಿಯಾಗಿದೆ.

ಇದನ್ನೂ ಓದಿ:

ಸ್ಥಿತಿ ಗಂಭೀರವಾಗುತ್ತಿದ್ದಂತೆ ಪ್ರೊಫೆಸರ್ ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ. ಈ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಈ ಘಟನೆ ಕಾಲೇಜು ವಾತಾವರಣದಲ್ಲಿ ಶಿಕ್ಷಕ-ವಿದ್ಯಾರ್ಥಿ ಸಂಬಂಧಗಳ ಬಗ್ಗೆ ಪ್ರಶ್ನೆಗಳನ್ನು ಎಬ್ಬಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂಬ ಮಾತು ಕೇಳಿಬರುತ್ತಿದೆ.

Must Read