ಶಿಕ್ಷಕರ ನೇಮಕಾತಿ ಹಗರಣ: ಇಡಿ ಬಲೆಗೆ ಬಿದ್ದ ಪಶ್ಚಿಮ ಬಂಗಾಳದ ಸಚಿವ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಾರ್ಥ ಚಟರ್ಜಿ ಅವರನ್ನು ಇಂದು ಬೆಳಗ್ಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ.

ನಿನ್ನೆ ಪಾರ್ಥ ಚಟರ್ಜಿ ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರ ಮನೆಯಲ್ಲಿ ಇಡಿ 20 ಕೋಟಿ ರೂಪಾಯಿ ನಗದು ವಶಪಡಿಸಿಕೊಂಡಿದ್ದು ಗೊತ್ತೇ ಇದೆ. ಈ ಹಿಂದೆ ಪಾರ್ಥ ಚಟರ್ಜಿ ಅವರು ಬಂಗಾಳದ ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪದ ಬಗ್ಗೆ ಇಡಿ ಅಧಿಕಾರಿಗಳು ನಿನ್ನೆ ರಾತ್ರಿಯಿಂದ ಪಾರ್ಥ ಚಟರ್ಜಿ ಅವರನ್ನು ವಿಚಾರಣೆ ನಡೆಸಿದ್ದಾರೆ. ಇಂದು ಅವರನ್ನು ಬಂಧಿಸಿ ಇಡಿ ಕಚೇರಿಗೆ ಕರೆತರಲಾಗಿದೆ. ಇ.ಡಿ ಅಧಿಕಾರಿಗಳು ಇಂದು ಬೆಳಿಗ್ಗೆ 8 ಕಾರುಗಳಲ್ಲಿ ಸಿಆರ್‌ಪಿಎಫ್ ಯೋಧರ ಭದ್ರತೆಯೊಂದಿಗೆ ದಕ್ಷಿಣ ಕೊಲ್ಕತ್ತದಲ್ಲಿರುವ ಪಾರ್ಥ ಚಟರ್ಜಿ ಅವರ ಮನೆಗೆ ತೆರಳಿ ಅವರನ್ನು ಬಂಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!