Sunday, February 5, 2023

Latest Posts

ಶಿಕ್ಷಕರ ನೇಮಕಾತಿ ಹಗರಣ: ಟಿಎಂಸಿ ಶಾಸಕರ 7.93 ಕೋಟಿ ಮೌಲ್ಯದ ಆಸ್ತಿ ಇಡಿ ಮುಟ್ಟುಗೋಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕಾತಿ ಹಗರಣದಲ್ಲಿ ತೃಣಮೂಲ ಕಾಂಗ್ರೆಸ್ ಶಾಸಕ ಮಾಣಿಕ್ ಭಟ್ಟಾಚಾರ್ಯ ಅವರ 7.93 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡಿದೆ.

ಮಾಣಿಕ್ ಭಟ್ಟಾಚಾರ್ಯ ಅವರಿಗೆ ಸೇರಿದ 61 ಖಾತೆಗಳಲ್ಲಿನ ಬ್ಯಾಂಕ್ ಬ್ಯಾಲೆನ್ಸ್ ಮತ್ತು ಮ್ಯೂಚುವಲ್ ಫಂಡ್ ಗಳಾಗಿವೆ. ಕೆಲವು ಬ್ಯಾಂಕ್ ಖಾತೆಗಳನ್ನು ಮಾಣಿಕ್ ಅವರ ಸ್ನೇಹಿತರು ಮತ್ತು ಸಂಬಂಧಿಕರ ಹೆಸರಿನಲ್ಲಿ ಇರಿಸಲಾಗಿದೆ.

ಹಣ ಲಾಂಡರಿಂಗ್ ಚಟುವಟಿಕೆಗಳಿಗೆ ಬಳಸಲಾದ ಖಾತೆಯು ಮಾಣಿಕ್ ಭಟ್ಟಾಚಾರ್ಯ ಅವರ ಪತ್ನಿ ಸತರೂಪ ಭಟ್ಟಾಚಾರ್ಯ ಮತ್ತು 2016 ರಲ್ಲಿ ನಿಧನರಾದ ಮೃತ್ಯುಂಜಯ್ ಚಟರ್ಜಿ ಹೆಸರಿನಲ್ಲಿ ಅಸ್ತಿತ್ವದಲ್ಲಿದೆ ಎಂದು ಇಡಿ ಹೇಳಿದೆ.

ಹಗರಣದಲ್ಲಿ ಶಾಸಕ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ಮಾಣಿಕ್ ಭಟ್ಟಾಚಾರ್ಯ ಅವರನ್ನು ಅಕ್ಟೋಬರ್ 10 ರಂದು ಇಡಿ ಬಂಧಿಸಿದ್ದು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇಡಿ ಈಗಾಗಲೇ ಒಟ್ಟು 49.80 ಕೋಟಿ ರೂ. ನಗದು, 5.08 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಚಿನ್ನಾಭರಣಗಳು, 48.22 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿದೆ. ಈ ಮೂಲಮ ಇಡಿ ವಶಕ್ಕೆ ಪಡೆದಿರುವ ಒಟ್ಟು ಮೊತ್ತ 111 ಕೋಟಿ ರೂ.ಆಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!