ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ನಾಯಕ ಅಭಿಷೇಕ್ ಬ್ಯಾನರ್ಜಿ ಅವರಿಗೆ ಅಕ್ಟೋಬರ್ 9 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ಬುಧವಾರ ಸಮನ್ಸ್ ಜಾರಿ ಮಾಡಿದೆ.
ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿ ರುಜಿರಾ ಅವರಿಗೂ ಸಮನ್ಸ್ ಜಾರಿ ಮಾಡಿದ್ದು, ಅವರಿಗೆ ಕ್ಟೋಬರ್ 11 ರಂದು ವಿಚಾರಣೆಗೆ ಕರೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ನಮ್ಮ ಅಧಿಕಾರಿಗಳು ಅಕ್ಟೋಬರ್ 9 ರಂದು ಬ್ಯಾನರ್ಜಿ ಮತ್ತು ಅಕ್ಟೋಬರ್ 11 ರಂದು ಅವರ ಪತ್ನಿಯನ್ನು ವಿಚಾರಣೆ ನಡೆಸಲಿದ್ದಾರೆ. ಇಬ್ಬರಿಗೂ ಇಲ್ಲಿನ ಸಿಜಿಒ ಕಾಂಪ್ಲೆಕ್ಸ್ನಲ್ಲಿರುವ ನಮ್ಮ ಕಚೇರಿಗೆ ಬರುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದಕ್ಕೂ ಮುನ್ನ, ಇದೇ ಪ್ರಕರಣ ಸಂಬಂಧ ಈ ವಾರ ತನ್ನ ಮುಂದೆ ವಿಚಾರಣೆಗೆ ಹಾಜರಾಗುವಂತೆ ಇಡಿ, ಟಿಎಂಸಿ ನಾಯಕನ ಪೋಷಕರಾದ ಅಮಿತ್ ಮತ್ತು ಲತಾ ಬ್ಯಾನರ್ಜಿಗೆ ಸಮನ್ಸ್ ನೀಡಿತ್ತು.