ಶಿಕ್ಷಕರ ನೇಮಕಾತಿ ಹಗರಣ: ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿ ನ್ಯಾಯಾಂಗ ಬಂಧನ ವಿಸ್ತರಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಮಾಜಿ ಸಚಿವ ಪಾರ್ಥ ಚಟರ್ಜಿ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕರಗೊಂಡಿದೆ. ಅವರನ್ನು ಸೆರಿದಂತೆ ಮೂವರು ಅಕ್ಟೋಬರ್ 19 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಎರಡೂ ಕಡೆಯ ವಾದವನ್ನು ಆಲಿಸಿದ ಸಿಬಿಐ ನ್ಯಾಯಾಲಯ ಚಟರ್ಜಿಯ ನ್ಯಾಯಾಂಗ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಿದೆ.
ಶಿಕ್ಷಕರ ನೇಮಕಾತಿ ಹಗರಣ (ಎಸ್‌ಎಸ್‌ಸಿ) ದಲ್ಲಿ ಹಣದ ಜಾಡು ಹಿಡಿದು ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಪಾರ್ಥ ಚಟರ್ಜಿ ಮತ್ತು ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರನ್ನು ಬಂಧಿಸಿದೆ. ತನಿಖಾ ಸಂಸ್ಥೆಯು ಜುಲೈ 23 ರಂದು ನಗರದಲ್ಲಿ ಮುಖರ್ಜಿ ಅವರ ಫ್ಲಾಟ್‌ಗಳಿಂದ ಚಿನ್ನಾಭರಣ ಮತ್ತು ಆಸ್ತಿ ಪತ್ರಗಳನ್ನು ಹೊರತುಪಡಿಸಿ 49.80 ಕೋಟಿ ರೂ.ಗಳನ್ನು ವಶಪಡಿಸಿಕೊಂಡ ಬಳಿಕ ಬಂಧಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!