ದಿಗಂತ ವರದಿ ವಿಜಯಪುರ:
ನಗರದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಹಿಜಾಬ್ ಧರಿಸಿ ಬಂದು ಶಿಕ್ಷಕಿಯರು ಹಾಗೂ ವಿದ್ಯಾರ್ಥಿಗಳು ತರಗತಿಗೆ ಹಾಜರಾದ ಘಟನೆ ನಡೆದಿದೆ.
ಹಿಜಾಬ್ ಧರಿಸಿಯೇ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸಿದ್ದು, ಹಿಜಾಬ್ ಧರಿಸಿಯೇ ಪಾರ್ಥನೆಯಲ್ಲಿ ಶಿಕ್ಷಕಿಯರು, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದು, ಹೈಕೋರ್ಟನ ಮಧ್ಯಂತರ ಆದೇಶವನ್ನು ಗಾಳಿಗೆ ತೂರಲಾಗಿದೆ.