September 28, 2026
Monday, September 28, 2026
spot_img

ಶಿಕ್ಷಕರೆಂದರೆ ಬರೀ ಪಾಠ ಹೇಳುವವರಲ್ಲ, ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಶಿಲ್ಪಿಗಳು: ಬಿ.ವೈ.ವಿಜಯೇಂದ್ರ

ಹೊಸದಿಗಂತ ವರದಿ ಕೊಪ್ಪಳ:

ಶಿಕ್ಷಣ ತಜ್ಞ, ರಾಷ್ಟ್ರಪತಿಗಳಾದರೂ ದೇಶಸೇವೆ ಮಾಡಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಅಂಗವಾಗಿ ಶಿಕ್ಷಕರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

5ನೇ ದಿನದ ʼಬಳ್ಳಾರಿ ಚಲೋʼ ಪಾದಯಾತ್ರೆಯು ಬೆಳಿಗ್ಗೆ ಕಾರಟಗಿಯಲ್ಲಿ ಆರಂಭಗೊಂಡಿತು. ಇದೇ ವೇಳೆ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದ ಅವರು, ಶಿಕ್ಷಕರೆಂದರೆ ಕೇವಲ ಪಾಠ ಹೇಳಿ ಕೊಡುವವರಲ್ಲ; ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಮಹತ್ತರ ಕಾರ್ಯವನ್ನು ಅವರು ನಿರ್ವಹಿಸುತ್ತಾರೆ ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ:

ಮಕ್ಕಳ ವ್ಯಕ್ತಿತ್ವ ನಿರ್ಮಿಸುವಲ್ಲಿ ಅವರ ಪಾತ್ರ ಗಮನಾರ್ಹವಾದುದು. ಒಬ್ಬ ಒಳ್ಳೆಯ ಶಿಕ್ಷಕ ಒಂದು ಪೀಳಿಗೆಯನ್ನೇ ಬದಲಾಯಿಸಬಲ್ಲ ಎಂದು ತಿಳಿಸಿದರು. ಪ್ರಧಾನಮಂತ್ರಿ ನರೇಂದ್ರ ಮೋದಿಜೀ ಅವರು 2047ರಲ್ಲಿ ವಿಕಸಿತ ಭಾರತ ನಿರ್ಮಾಣಕ್ಕೆ ಯುವಶಕ್ತಿಯನ್ನು ಸರಿದಾರಿಯಲ್ಲಿ ಒಯ್ಯಬಲ್ಲ ಮಹತ್ವದ ಕಾರ್ಯವನ್ನು ಶಿಕ್ಷಕರು ಮಾಡುತ್ತಾರೆ ಎಂದು ಹೇಳಿದ್ದಾಗಿ ತಿಳಿಸಿದರು.

Must Read