ಹೊಸದಿಗಂತ ವರದಿ ಅಂಕೋಲಾ:
ಉತ್ತರ ಕನ್ನಡ ಜಿಲ್ಲಾ ಪಂಚಾಯತ್, ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಅಂಕೋಲಾ ಇವರ ಸಂಯುಕ್ತ ಆಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಈ ಸಂದರ್ಭದಲ್ಲಿ ಉತ್ತರ ಕನ್ನಡ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಉತ್ತರ ಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಪಟ್ಟಣದ ನಾಡವರ ಸಭಾಭವನದಲ್ಲಿ ನಡೆಯಿತು.

ರಾಜ್ಯ ಸರ್ಕಾರದ ಸಹಕಾರ ಕ್ಷೇತ್ರದ ಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಅಂಕೋಲಾದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕೆ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಉಸ್ತುವಾರಿ ಸಚಿವರ ಅನುದಾನದಿಂದ 1 ಕೋಟಿ ರೂಪಾಯಿ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಇದನ್ನೂ ಓದಿ:
ಈ ಕಾರ್ಯಕ್ರಮದಲ್ಲಿ ಕಾರವಾರ ಅಂಕೋಲಾ ಶಾಸಕ ಸತೀಶ ಸೈಲ್, ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ, ಜಿಲ್ಲಾಪೊಲೀಸ್ ವರಿಷ್ಠ ದೀಪನ್.ಎಂ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣ ಅಧಿಕಾರಿ ದಿಲೀಪಶಶಿ, ವಿವಿಧ ಶಿಕ್ಷಕರ ಸಂಘಟನೆಗಳ ಪ್ರಮುಖರು, ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.



